ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಗೆ ( Om prakash chautala ) 4 ವರ್ಷ ಜೈಲು ಶಿಕ್ಷೆ ವಿಧಿಸಿ ದೆಹಲಿ ವಿಶೇಷ ಸಿಬಿಐ ಕೋರ್ಟ್ ( Cbi court ) ತೀರ್ಪು ಹೊರಹಾಕಿದೆ.
1993 ಮತ್ತು 2006ರ ನಡುವೆ ಚೌಟಾಲಾ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆಂಬ ಆರೋಪದ ಮೇಲೆ ಈ ಶಿಕ್ಷೆ ವಿಧಿಸಲಾಗಿದೆ.
ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಅಕ್ರಮ ಆಸ್ತಿ ಪ್ರಕರಣದಲ್ಲಿ ಓಂ ಪ್ರಕಾಶ್ ಚೌಟಾಲ ಅವರಿಗೆ ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು 50 ಲಕ್ಷ ರೂಪಾಯಿ ದಂಡ ವಿಧಿಸಿದೆ. ಇದರ ಜೊತೆಗೆ ಅವರ ನಾಲ್ಕು ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಆದೇಶ ಸಹ ಹೊರಹಾಕಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲ ದೋಷಿ ಎಂದು ದೆಹಲಿಯ ಸಿಬಿಐ ಕೋರ್ಟ್ ಕಳೆದ ಶನಿವಾರ ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಇದನ್ನೂ ಓದಿ : – ವಿಧಾನಪರಿಷತ್ ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ