ಬೆಂಗಳೂರು : ಮಾಜಿ ಸಚಿವ ಪ್ರೊ. ಮುಮ್ತಾಜ್ ಅಲಿ ಖಾನ್ ನಿಧನರಾಗಿದ್ದಾರೆ. 94 ವರ್ಷದ ಅವರು ಬೆಂಗಳೂರಿನ ಗಂಗಾನಗರ ನಿವಾಸದಲ್ಲಿ ಕೊನೆಯುಸಿರೆಳೆದರು. ವಯೋಸಹಜ ಕಾಯಿಲೆಯಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರೊ. ಮಮ್ತಾಜ್ ಅಲಿ ಖಾನ್ ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. 2008ರಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಅಲ್ಪಸಂಖ್ಯಾತ ಕಲ್ಯಾಣ, ಹಜ್, ವಕ್ಫ್ ಖಾತೆ ಸಚಿವರೂ ಆಗಿದ್ದರು.
ಬೆಂಗಳೂರಿನ ಕೃಷಿ ವಿ.ವಿ.ಯಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿ ನಂತರ ಸ್ವಯಂ ನಿವೃತ್ತಿ ಪಡೆದು ಕಳೆದ 30 ವರ್ಷಗಳಿಂದ ಆರ್.ಟಿ.ನಗರದಲ್ಲಿ ಮೃತ ಮಗ ನೂರ್ ಅಹ್ಮದ್ ಅಲಿ ಖಾನ್ ಹೆಸರಿನಲ್ಲಿ ಶಾಲೆ ನಡೆಸುತ್ತಿದ್ದರು.