ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಯುಟಿ ಖಾದರ್ ಪ್ರಯಾಣಿಸುತ್ತಿದ್ದ ಕಾರು ಮತ್ತು ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಸಚಿವರು ಯಾವುದೇ ಪ್ರಾಣಾಪಾಯ ಇಲ್ಲದೇ ಪಾರಾದ ಘಟನೆ ದಾವಣಗೆರೆ ಸಮೀಪದ ಆನಗೋಡು ಎನ್ ಎಚ್4ರಲ್ಲಿ ಸಂಭವಿಸಿದೆ.
ಬುಧವಾರ ಬೆಳಿಗ್ಗೆ ಖಾದರ್ ಅವರ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ವೇಳೆ ಇನ್ನೋವಾ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.
ಬೆಳಗಾವಿ ಲೋಕಸಭೆ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆ ನಂತರ ಖಾದರ್ ಅವರು ಬೆಂಗಳೂರಿಗೆ ಹಿಂತಿರುಗಿದ್ದಾರೆ. ಸ್ಥಳಕ್ಕೆ ಎಸ್.ಪಿ. ಹನುಮಂತರಾಯ ತೆರಳಿ ಪರಿಶೀಲನೆ ನಡೆಸಿದ್ದಾರೆ.