ಬೆಂಗಳೂರಿನ ಸಭೆಯಲ್ಲಿ ಮಾಜಿ ಶಾಸಕ ಶ್ರೀ ಶೈಲಪ್ಪ ಬಿದರೂರು ಹೃದಯಘಾತದಿಂದ ನಿಧನ

ಇಂದು ಶ್ರೀಶೈಲಪ್ಪ ಬಿದರೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಆಗಮಿಸಿದ್ದರು. ಸಭೆಯ ಆರಂಭದಲ್ಲಿಯೇ ಅವರು ವಾಂತಿ ಮಾಡಿಕೊಂಡು ಕುಸಿದು ಬಿದ್ದರು.

ಗದಗ ( GADAGA ) ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು (Srishailappa Baderu) ಗೆ ಹೃದಯಾಘಾತವಾಗಿದೆ. ಕಾಂಗ್ರೆಸ್ ನಾಯಕನನ್ನು ಕಾರ್ಯಕರ್ತರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

ಇಂದು ಶ್ರೀಶೈಲಪ್ಪ ಬಿದರೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಆಗಮಿಸಿದ್ದರು. ಸಭೆಯ ಆರಂಭದಲ್ಲಿಯೇ ಅವರು ವಾಂತಿ ಮಾಡಿಕೊಂಡು ಕುಸಿದು ಬಿದ್ದರು. ತಕ್ಷಣ ಕಾಂಗ್ರೆಸ್ ( CONGRESS ) ಕಾರ್ಯಕರ್ತರು ಅವರನ್ನು ಕಾರಿನ ಮೂಲಕ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಶ್ರೀಶೈಲಪ್ಪ ಬಿದರೂರು ರೋಣ ಹಾಗೂ ಗದಗ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತರಾಗಿದ್ದ ಅವರು 2019ರಲ್ಲಿ ಕಾಂಗ್ರೆಸ್ ಸೇರಿದ್ದರು.

ಇದನ್ನೂ ಓದಿ : –  ಸಾದಲಿಯ ಶ್ರೀ ಚನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!