ಪಾಕಿಸ್ತಾನ ತಂಡದ ಮಾಜಿ ನಾಯಕ ರಮಿಜ್ ರಾಜಾ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಮಾಜಿ ಮಧ್ಯಮ ವೇಗಿಯೂ ಆಗಿರುವ ರಮಿಜ್ ರಾಜಾ ಅವರನ್ನು ಮೂರು ವರ್ಷಗಳ ಅವಧಿಗೆ ಪಿಸಿಬಿ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇಶಾನ್ ಮಣಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ನೇಮಕಗೊಂಡಿದ್ದಾರೆ.
ಪಾಕಿಸ್ತಾನ ಪರ 250 ಪಂದ್ಯಗಳನ್ನು ಆಡಿರುವ ರಮಿಜ್ ರಾಜಾ, ಪಿಸಿಬಿ ಸಿಇಒ ಆಗಿಯೂ ಕಾರ್ಯ ನಿರ್ವಹಿಸಿದ್ದರು. ಅಲ್ಲದೇ ಕ್ರಿಕೆಟ್ ವಿಶ್ಲೇಷಕರಾಗಿ ಪಾಕಿಸ್ತಾನದ ಧ್ವನಿಯಾಗಿ ಮಾತನಾಡುತ್ತಿದ್ದರು.