ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ಸಿಂಗ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕು ಏರಿಕೆಯಾಗುವುದನ್ನು ತಡೆಯಲು ನಿನ್ನೆಯಷ್ಟೇ ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮಹತ್ವದ ಸಲಹೆ ನೀಡಿದ್ದರು.
ಇಂದು ಅವರಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಇನ್ನೂ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯಸಭಾ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ ಸೇರಿದಂತೆ ಹಲವು ನಾಯಕರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸಿದ್ದಾರೆ.