ಮಂಗಳೂರು: ಆಂಧ್ರ ಪ್ರದೇಶದಿಂದ ರಾಜ್ಯಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಕಾಸರಗೋಡು ಹಾಗೂ ಮಂಗಳೂರು ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ. ಬಂಧಿತರ ವಿರುದ್ದ ಹಲವು ಡಕಾಯಿತಿ ಪ್ರಕರಣಗಳು ದಾಖಲಾಗಿವೆ.
ಬಂಧಿತ ಆರೋಪಿಗಳಿಂದ 200 ಕೆಜಿ ಗಾಂಜಾ, ತಲ್ವಾರು, ಲಾರಿ ಮತ್ತು ಕಾರ ವಶಕ್ಕೆ ಪಡೆಯಲಾಗಿದೆ. ಈ ಕೃತ್ಯದಲ್ಲಿ ಇನ್ನೂ ಕೆಲವರು ಇರಬಹುದು ಎಂಬ ಶಂಕೆ ಇದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.