ಒಂದೇ ಕುಟುಂಬದ ನಾಲ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಎಚ್.ಮೂಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎಚ್.ಮೂಕಹಳ್ಳಿ ಗ್ರಾಮದ ಮಹಾದೇವಪ್ಪ ಮಹಾದೇವಪ್ಪ, ಪತ್ನಿ ಮಂಗಳಮ್ಮ, ಮಕ್ಕಳಾದ ಗೀತಾ ಮತ್ತು ಶೃತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ಬುಧವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಆತ್ಮಹತ್ಯೆ ಗೆ ಏನು ಕಾರಣ ಎಂಬುದು ತಿಳಿದು ಬಂದಿಲ್ಲ. ಆದರೆ ಮಹದೇವಪ್ಪ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಹೋಂ ಐಸೋಲೇಷನ್ ನಲ್ಲಿದ್ದರು. ಲಾಕ್ ಡೌನ್ ನಿಂದಾಗಿ ಕುಟುಂಬದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಕೊರೊನಾ ಸೋಂಕು ಭೀತಿ ಕೂಡ ಆವರಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.