ಎಸಿ ಸ್ಫೋಟಗೊಂಡು ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರು ಸಾವು

ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಫೋಟಗೊಂಡು ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ.

ಎಸಿ ಸ್ಫೋಟದಿಂದ ಮನೆಯಲ್ಲಿದ್ದ ಪತಿ, ಪತ್ನಿ, ಇಬ್ಬರು ಮಕ್ಕಳು ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ಶಾರ್ಟ್ಸರ್ಕ್ಯೂಟ್ನಿಂದ ಎಸಿ ಸ್ಫೋಟಗೊಂಡು ದುರ್ಘಟನೆ ನಡೆದಿದೆ ಎನ್ನಲಾಗಿದೆ. ವೆಂಕಟ್ ಪ್ರಶಾಂತ್(42), ಪತ್ನಿ ಡಿ.ಚಂದ್ರಕಲಾ(38), ಮಕ್ಕಳಾದ ಅರ್ದ್ವಿಕ್(16), ಪ್ರೇರಣಾ(8) ಮೃತರು.

ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಫೋಟಗೊಂಡು ನಾಲ್ವರು ಮೃತಪಟ್ಟಿದ್ದಾರೆ. ಜೊತೆಗೆ ಎಸಿ ಸ್ಫೋಟಗೊಂಡು ಇಡೀ ಮನೆ ಧಗಧಗನೆ ಹೊತ್ತಿ ಉರಿದಿದೆ. ಸ್ಥಳಕ್ಕೆ ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ತಹಸೀಲ್ದಾರ್ ವಿಶ್ವಜಿಜ್ ಮೆಹ್ತಾ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ. ಪದ್ಮಶ್ರೀ ಪುರಸ್ಕೃತ ಮಾತಾ ಮಂಜಮ್ಮ ಜೋಗತಿ ಅವರೂ ಘಟನೆ ಸ್ಥಳದಲ್ಲಿದ್ದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಇದನ್ನು ಓದಿ :- ಸುಭುದೇಂದ್ರ ತೀರ್ಥರ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!