ಹಲವು ಜನಪರ ಹೋರಾಟಗಳಲ್ಲಿ ಭಾಗಿಯಾಗಿ ಯುವ ಹೋರಾಟಗಾರರಿಗೆ ಸ್ಫೂರ್ತಿಯಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನಿಧನರಾಗಿದ್ದಾರೆ. ಅವರಿಗೆ 104 ವರ್ಷ ವಯಸ್ಸಾಗಿತ್ತು.
ಕೊರೊನಾ ಸೋಂಕಿಗೆ ಒಳಗಾಗಿದ್ದ ದೊರೆಸ್ವಾಮಿ ಕೆಲವು ದಿನಗಳ ಹಿಂದೆಯಷ್ಟೇ ಗುಣಮುಖಿತರಾಗಿದ್ದರು. ಆದರೆ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮಹಾತ್ಮಾ ಗಾಂಧೀಜಿ ಅವರಿಂದ ಪ್ರೇರಣೆ ಪಡೆದು ಹಲವು ಭೂಕಬಳಿಕೆ, ಸಿಎಎ ಸೇರಿದಂತೆ ಹಲವು ಹೋರಾಟಗಳಲ್ಲಿ ಪಾಲ್ಗೊಂಡಿದ್ದ ದೊರೆಸ್ವಾಮಿ ಅವರಿಗೆ ಬಸವ ಪುರಸ್ಕಾರ, ಗಾಂಧಿ ಸೇವಾ ಪ್ರಶಸ್ತಿ, ಗೋಯೆಂಕಾ ಸೇರಿದಂತೆ ಹಲವು ಪ್ರಶಸ್ತಿಗಳು ಒಲಿದು ಬಂದಿದ್ದವು.