ನವದೆಹಲಿ: ಫ್ರಾನ್ಸ್ ವಿದೇಶಾಂಗ ಸಚಿವ ಜೀನ್ ಯಸ್‍ಲೆ ಡ್ರಿಯಾನ್ ಏಪ್ರಿಲ್ 13 ರಿಂದ 15ರ ವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್ ಅವರೊಂದಿಗೆ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಹಿತಾಸಕ್ತಿಗಳ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಅಲ್ಲದೇ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರ ಜೊತೆಗೂ ಚರ್ಚೆ ನಡೆಸಲಿದ್ದಾರೆ. ಫ್ರೆಂಚ್ ವಿದೇಶಾಂಗ ಸಚಿವರ ಭೇಟಿಯು ಕೋವಿಡ್ ನಂತರದ ಸಂದರ್ಭದಲ್ಲಿ ವ್ಯಾಪಾರ, ರಕ್ಷಣಾ, ಹವಾಮಾನ, ವಲಸೆ ಮತ್ತು ಚಲನಶೀಲತೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಬಲಪಡಿಸಲು ದಾರಿ ಮಾಡಿಕೊಡುತ್ತದೆ ಎಂದು ಭಾರತಿಯ ವಿದೇಶಾಂಗ ಸಚಿವಾಲಯ ತಿಳಿಸಿದೆ.