ಬೆಂಗಳೂರಿನ ವಿಧಾನಸೌಧದಲ್ಲಿ ಸೆಪ್ಟೆಂಬರ್ 13ರಿಂದ 10 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ಸಚಿವ ಜೆ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಸೂಚನೆ ಇನ್ನೂ ಸಿಕ್ಕಿಲ್ಲ. ಅಲ್ಲದೇ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಕುರಿತು ಯಾವುದೇ ಚರ್ಚೆ ಆಗಿಲ್ಲ ಎಂದು ಅವರು ಹೇಳಿದರು.