ಎರಡು ದಿನಗಳ ನಂತರ ಗುರುವಾರ ಮತ್ತೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆ ಮಾಡಲಾಗಿದೆ.
ತೈಲ ಕಂಪನಿಗಳು ಗುರುವಾರ ಪೆಟ್ರೋಲ್ ಲೀಟರ್ ಗೆ 25 ಪೈಸೆ ಮತ್ತು ಡೀಸೆಲ್ ಲೀಟರ್ ಗೆ 30 ಪೈಸೆ ಏರಿಕೆ ಮಾಡಿದೆ. ಈ ಮೂಲಕ ದೇಶದ ಹಲವು ಭಾಗಗಳಲ್ಲಿ ಪೆಟ್ರೋಲ್ ದರ 100 ರೂ ಗಡಿದಾಟಿದೆ.
ಕಳೆದ ಒಂದು ವಾರದಲ್ಲಿ 6ನೇ ಬಾರಿಗೆ ತೈಲೋತ್ಪನ್ನಗಳ ದರ ಏರಿಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂಧನ ದರ ಏರಿಕೆಯ ಕಾರಣ ದರ ಏರಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.
ದೆಹಲಿಯಲ್ಲಿ ಇದೀಗ ಪೆಟ್ರೋಲ್ 93.74ರೂ ಮತ್ತು ಡೀಸೆಲ್ 84.67ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪೆಟ್ರೋಲ್ 93.78ರೂ, ಡೀಸೆಲ್ 87.51 ರೂಗೆ ಏರಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ 99.98ರೂ, ಡೀಸೆಲ್ 91.93ರೂಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ದರ 95.33ರೂ ಮತ್ತು ಡೀಸೆಲ್ 89.44ರೂ ಗೆ ಏರಿಕೆಯಾಗಿದೆ.