ನವದೆಹಲಿ: ಕೊರೊನಾ ವೈರಸ್ ಹರಡದಂತೆ ತಡೆಯಲು ಇರುವ ಏಕೈಕ ಮಾರ್ಗ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ಕೇಂದ್ರ ಸರ್ಕಾರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಕೊರೊನಾದಿಂದ ಅನೇಕ ಅಮಾಯಕ ಜನರು ಸಾವನ್ನಪ್ಪುತ್ತಿದ್ದರೂ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದೆ ಎಂದು ಅವರು ಆರೋಪಿಸಿದ್ದಾರೆ.
ಕೋವಿಡ್ -19 ಸೋಂಕು ಹರಡದಂತೆ ಈಗ ಇರುವ ಏಕೈಕ ಮಾರ್ಗ,ದುರ್ಬಲ ವರ್ಗಗಳಿಗೆ ನ್ಯಾಯ ರಕ್ಷಣೆಯೊಂದಿಗೆ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವುದಾಗಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಕಳೆದ ತಿಂಗಳು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸೂಕ್ಷ್ಮ ಕಂಟೈನ್ ಮೆಂಟ್ ವಲಯದತ್ತ ಗಮನ ಹರಿಸಿ. ಕೊನೆಯ ಮಾರ್ಗವಾಗಿ ಲಾಕ್ ಡೌನ್ ಬಳಸಿ ಎಂದು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದರು.