ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ಮತ್ತೊಂದು ದುರಂತ ಸಂಭವಿಸಿದ್ದು, ಮೂವರು ಬಲಿಯಾದ ಆಘಾತಕಾರಿ ಘಟನೆ ನಗರ್ತಪೇಟೆಯಲ್ಲಿ ನಡೆದಿದೆ.
ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ಅಂಗಡಿಯೊಂದರಲ್ಲಿ ಗುರುವಾರ ಮಧ್ಯಾಹ್ನ ದುರಂತ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮೂವರ ದೇಹಗಳು ಛಿದ್ರಗೊಂಡಿವೆ.
ಎನ್.ಟಿ. ಪೇಟೆ 4ನೇ ಮುಖ್ಯರಸ್ತೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 10ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗೆ ಆಹುತಿಯಾಗಿದ್ದು, ಸ್ಥಳಕ್ಕೆ ವಿವಿ ಪುರಂ ಪೊಲೀಸರು ಹಾಗೂ ಅಗ್ನಿ ಸಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.
ಪಟಾಕಿ ಸ್ಫೋಟದಿಂದ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.
ಸ್ಫೋಟದ ತೀವ್ರತೆಗೆ ಪಕ್ಕದ ಮನೆಗಳಿಗೂ ಹಾನಿಯಾಗಿದ್ದು, ಹಲವರಿಗೆ ಗಂಭೀರವಾದ ಗಾಯವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.