ಸ್ಫೋಟಕ ವಸ್ತುಗಳನ್ನು ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದ ಪರಿಣಾಮ ಒಬ್ಬ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದೆ.
ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿ ಗ್ರಾಮದ ಸಮೀಪವಿರುವ ಸ್ಫೋಟಕಗಳ ಉಗ್ರಾಣದ ಬಳಿ ಭಾನುವಾರ ಮಧ್ಯಾಹ್ನ ದುರಂತ ಸಂಭವಿಸಿದೆ.
27 ವರ್ಷದ ಸಂಪತ್ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿರುವ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಗೆ ಸಂಪತ್ ದೇಹ 300 ಮೀ. ದೂರ ಹಾರಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಉಗ್ರಾಣದಲ್ಲಿ ಜಿಲೆಟಿನ್ ಕಡ್ಡಿ ಸೇರಿದಂತೆ ಇತರೆ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಲಾಗಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದಾರೆ.