ರಾಜ್ಯದಲ್ಲಿ ಪೊಲಿಯೋ ಮಾದರಿಯಲ್ಲಿ ಕೋವಿಡ್ ಲಸಿಕೆ ನೀಡಿ: ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಪೊಲಿಯೋ ಮಾದರಿಯಲ್ಲಿ ಕೋವಿಡ್ ಲಸಿಕೆ ನೀಡಬೇಕು. ಮನೆ ಮನೆಗೂ ತೆರಳಿ ಕೋವಿಡ್ ಲಸಿಕೆ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಿಯಾನಕ್ಕೆ ಎರಡು ಸಾವಿರ ಕೋಟಿ ರೂಪಾಯಿ ಬೇಕು. ರಾಜ್ಯದಲ್ಲಿ ರೆಮ್ ಡಿಸಿವಿರ್ ಇಂಜೆಕ್ಷನ್ ಕೂಡ ಸಿಗುತ್ತಿಲ್ಲ ಎಂದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ಲಸಿಕೆ ಇಲ್ಲದೇ ಇಂದು 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕಾ ಅಭಿಯಾನ ಆರಂಭಿಸಿದ್ದಾರೆ. ಇದು ಕೇವಲ ಫೋಟೋಗಾಗಿ ಅಭಿಯಾನ ಆರಂಭಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಆದರೆ, ಪೂರ್ವ ತಯಾರಿ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರ ಯಾವ ತಯಾರಿ ಮಾಡಿಕೊಂಡಿದೆ? ನನಗಿರುವ ಮಾಹಿತಿ ಪ್ರಕಾರ ಮೇ. ತಿಂಗಳಾಂತ್ಯಕ್ಕೆ ಲಸಿಕೆ ಸಿಗಬಹುದು ಎಂದು ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!