ನವದೆಹಲಿ : ಭಾರತದಲ್ಲಿ ಚಿನ್ನದ ಬೆಲೆ ಇಂದು ಏರಿಕೆಯಾಗಿದ್ದು, 2 ದಿನಗಳ ಹಿಂದೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,060 ರೂ. ಇದ್ದುದು ಇಂದು 45,340 ರೂ.ಗೆ ಏರಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 46,060 ರೂ. ಇದ್ದುದು ಇಂದು 46,340 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.
ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 49,270 ರೂ. ಆಗಿದೆ. ಹಾಗೇ, 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಇಂದು 45,160 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.
ಭಾರತದಲ್ಲಿ ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಬೆಳ್ಳಿ ಬೆಲೆ ಇಂದು 1 ಕೆಜಿಗೆ 73,400 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 73,400 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 76,800 ರೂ. ಆಸುಪಾಸಿನಲ್ಲಿದೆ.