ಆಭರಣ ಪ್ರಿಯರಿಗೆ ಸಿಹಿ ಸುದ್ದಿ : ಚಿನ್ನದ ಬೆಲೆಯಲ್ಲಿ ಇಳಿಕೆ

ನವದೆಹಲಿ: ಭಾರತದಲ್ಲಿ ಎರಡು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಕೊಂಚ ಇಳಿಕೆಯಾಗಿದೆ. ದೇಶದ ನಾನಾ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 50 ಸಾವಿರ ರೂ. ದಾಟಿದೆ. ಭಾರತದಲ್ಲಿ 2 ದಿನಗಳ ಹಿಂದೆ 46,400 ರೂ. ಇದ್ದ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 45,680 ರೂ.ಗೆ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 48,020 ರೂ. ಇದ್ದುದು ಇಂದು 46,680 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.
ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 47,350 ರೂ. ಆಗಿದೆ. ಹಾಗೇ, 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಇಂದು 43,400 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.
ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.