ಬೆಂಗಳೂರು : ಚಿನ್ನಾಭರಣ ದರದಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಲೇ ಇದ್ದ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಂದು ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,800 ರೂಪಾಯಿ ಗೆ ಇಳಿಕೆಯಾಗಿದೆ. 100 ಗ್ರಾಂ ಚಿನ್ನ 4,58,000 ರೂಪಾಯಿಗೆ ಕುಸಿತ ಕಂಡಿದೆ. ಬೆಳ್ಳಿ ಬೆಲೆಯಲ್ಲೂ ಸಹ ಇಂದು ಇಳಿಕೆ ಕಂಡುಬಂದಿದೆ.
1 ಕೆಜಿ ಬೆಳ್ಳಿ ದರ 71 ಸಾವಿರ ರೂ. ಆಗಿದೆ. ಚಿನ್ನ ಮತ್ತು ಬೆಳ್ಳಿ ದರ ಎರಡೂ ಆಭರಣಗಳು ಕೂಡ ಇಳಿಕೆ ಕಂಡುಬಂದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಿನ್ನದ ದರ ಕೊಂಚ ಏರಿಕೆಯಾಗಿದೆ.