ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಗಣಿಗಳಿಂದ ತೆಗೆದ ಕಬ್ಬಿಣದ ಅದಿರನ್ನು ರಫ್ತು ಮಾಡಲು ಗಣಿಗಾರಿಕೆ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯ ಪೀಠವು ಕೇಂದ್ರ ಸರ್ಕಾರದ ನಿಲುವನ್ನು ಗಮನಿಸಿ ಕಬ್ಬಿಣದ ಅದಿರು ರಫ್ತು ಮೇಲಿನ ನಿರ್ಬಂಧವನ್ನು ತೆಗೆದುಹಾಕಿದೆ. ಅಧಿಕಾರಿಗಳು ವಿಧಿಸಿರುವ ಷರತ್ತುಗಳನ್ನು ಗಮನಿಸುವಂತೆ ಸಂಸ್ಥೆಗಳಿಗೆ ಸೂಚಿಸಿದೆ.
ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಈಗಾಗಲೇ ಅಗೆದ ಕಬ್ಬಿಣದ ಅದಿರಿನ ದಾಸ್ತಾನುಗಳನ್ನು ಮಾರಾಟ ಮಾಡಲು ಮೇಲ್ಮನವಿದಾರರಿಗೆ ಅನುಮತಿ ನೀಡುತ್ತೇವೆ. ಇ-ಹರಾಜನ್ನು ಆಶ್ರಯಿಸದೆ ನೇರ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಕಬ್ಬಿಣದ ಅದಿರು ಹಂಚಿಕೆಗೆ ಅನುಮತಿ ನೀಡುತ್ತೇವೆ. ಇದನ್ನೂ ಓದಿ :- ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ- ಮುಂಬೈನಲ್ಲಿ ತುರ್ತು ಭೂಸ್ಪರ್ಶ
ಕರ್ನಾಟಕದಲ್ಲಿ ಉತ್ಪಾದಿಸುವ ಕಬ್ಬಿಣದ ಅದಿರನ್ನು ವಿದೇಶಗಳಿಗೆ ಕೇಂದ್ರ ಸರ್ಕಾರದ ನೀತಿಗಳ ಪ್ರಕಾರ ರಫ್ತು ಮಾಡಲು ಅರ್ಜಿದಾರರಿಗೆ ಅನುಮತಿ ನೀಡಲಾಗಿದೆ ಎಂದು ನ್ಯಾಯಪೀಠ ಹೇಳಿದೆ.
ಕರ್ನಾಟಕದಿಂದ ಕಬ್ಬಿಣದ ಅದಿರು ರಫ್ತು ಮಾಡುವುದನ್ನು ಸುಪ್ರೀಂ ಕೋರ್ಟ್ 2012ರಲ್ಲಿ ನಿಷೇಧಿಸಿತ್ತು. ಪರಿಸರ ಅವನತಿಯನ್ನು ತಡೆಗಟ್ಟುವ ಉದ್ದೇಶದಿಂದ ಮತ್ತು ರಾಜ್ಯದ ಖನಿಜ ಸಂಪನ್ಮೂಲಗಳನ್ನು ಭವಿಷ್ಯದ ಪೀಳಿಗೆಗೆ ಸಂರಕ್ಷಿಸಲು ನಿಷೇಧ ಹೇರಲಾಗಿತ್ತು.
ಕಬ್ಬಿಣದ ಅದಿರಿನ ಮಾರಾಟ ಮತ್ತು ರಫ್ತಿನ ಮೇಲಿನ ನಿರ್ಬಂಧಗಳನ್ನು ಮಿತಿಮೀರಿದ ಉಲ್ಲಂಘನೆಗಳ ಕಾರಣದಿಂದ ಹಿಂದೆಗೆದುಕೊಳ್ಳುವಂತೆ ಕೋರಿ ಗಣಿಗಾರಿಕೆ ಸಂಸ್ಥೆಗಳ ಮನವಿ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಇದನ್ನೂ ಓದಿ :- ದಕ್ಷಿಣ ಭಾರತದಲ್ಲಿ ಚಿಗುರೊಡೆದ ಬಾಕ್ಸಿಂಗ್ – ಹೆಮ್ಮೆಯ ಸಾಧಕಿ ನಿಖತ್ ಝರೀನ್