ಹಳೇ ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ದಂಡದ ಆದೇಶಕ್ಕೆ ಹೈಕೋರ್ಟ್ ತಡೆ

ಹದಿನೈದು ವರ್ಷ ಹಳೆಯದಾದ ವಾಹನಗಳ ನೋಂದಣಿ ಮತ್ತು ಕ್ಷಮತಾ ಪ್ರಮಾಣಪತ್ರ (ಫಿಟ್ನೆಸ್ ಸರ್ಟಿಫಿಕೇಟ್) ನವೀಕರಣಕ್ಕೆ ವಿಧಿಸುತ್ತಿದ್ದ ಅಧಿಕ ಶುಲ್ಕ ಮತ್ತು ದಂಡದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

Motor vehicle - Wikipedia

ಕರ್ನಾಟಕ ಲಾರಿ ಮಾಲೀಕರ ಒಕ್ಕೂಟ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ರಜಾ ಕಾಲದ ವಿಶೇಷ ನ್ಯಾಯಪೀಠ, ಈ ಆದೇಶ ನೀಡಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಮಧ್ಯಂತರ ಆದೇಶವನ್ನು ಹೊರಡಿಸಿ ಸರಕಾರ, ಸಾರಿಗೆ ಇಲಾಖೆ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

Bengaluru Now Has 80 Lakh Vehicles On Road; The City Registers 1750 Vehicles  Per Day - MetroSaga

“ಈ ವರ್ಷದ ಏಪ್ರಿಲ್ 1ರಿಂದ ಅನ್ವಯವಾಗುವಂತೆ 15 ವರ್ಷ ಮೇಲ್ಪಟ್ಟ ಎಲ್ಲ ಹಳೆಯ ವಾಹನಗಳ ದಂಡದ ಪ್ರಮಾಣದಲ್ಲಿ ಭಾರಿ ಏರಿಕೆ ಮಾಡಲಾಗಿದೆ. ನೋಂದಣಿ ಮತ್ತು ಕ್ಷಮತಾ ಪ್ರಮಾಣಪತ್ರಗಳ ನವೀಕರಣಕ್ಕೆ 10 ಸಾವಿರ ರೂ. ವಿಧಿಸಲಾಗುತ್ತಿದೆ. ಒಂದು ವೇಳೆ ಎಫ್ಸಿ ಅವಧಿ ಮುಕ್ತಾಯಗೊಂಡಿದ್ದರೆ ಸಾರಿಗೇತರ ವಾಹನಗಳಿಗೆ ತಿಂಗಳಿಗೆ ಹೆಚ್ಚುವರಿಯಾಗಿ 500 ರೂ. ದಂಡ ವಿಧಿಸಲಾಗುತ್ತಿದೆ. ಇದು ಅತ್ಯಂತ ದುಬಾರಿಯಾಗಿದ್ದು, ವಾಹನ ಸವಾರರಿಗೂ ನಿಜಕ್ಕೂ ತುಂಬಾ ಹೊರೆಯಾಗಿದೆ” ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನ ಸೆಳೆದಿದ್ದರು. ಇದನ್ನೂ ಓದಿ : – ಬೆಂಗಳೂರು ಹೊರವಲಯದಲ್ಲಿ ಅಂತರಾಷ್ಟ್ರೀಯ ಮಟ್ಟದ ಪಾರ್ಕ್ ನಿರ್ಮಾಣ – ಸಚಿವ ಮುನಿರತ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!