ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಲಸನ್ನಿಧಿ ಪಾರಂಪರಿಕ ಕಟ್ಟಡವನ್ನು ಅನಧಿಕೃತವಾಗಿ ನವೀಕರಣಗೊಳಿಸಿರುವ ದೂರಿನ ಕುರಿತು ರಾಜ್ಯ ಸರಕಾರ ತನಿಖೆಗೆ ಆದೇಶಿಸಿದ್ದು, ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಂಕಷ್ಟ ಶುರುವಾಗಿದೆ.
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ರೋಹಿಣಿ ಸಿಂಧೂರಿ ಅಕ್ರಮವಾಗಿ ನವೀಕರಣ ಮಾಡಿದ್ದ ಪ್ರಕರಣದ ತನಿಖೆ ನಡೆಸುವಂತೆ ಪ್ರಾದೇಶಿಕ ಆಯುಕ್ತರಿಗೆ ಆದೇಶ ನೀಡಿದ್ದು, 7 ದಿನಗಳ ಒಳಗಅಗಿ ವರದಿ ನೀಡುವಂತೆ ಸೂಚಿಸಲಾಗಿದೆ.
ಮೈಸೂರು ಜಿಲ್ಲಾಧಿಕಾರಿ ಅಧಿಕೃತವಾಗಿ ಜಲಸನ್ನಿಧಿ ಪಾರಂಪರಿಕ ಕಟ್ಟಡವನ್ನು ಅನಧಿಕೃತವಾಗಿ ನವೀಕರಿಸಿರುವ ಬಗ್ಗೆ ಶಾಸಕ ಸಾರಾ ಮಹೇಶ್ ನೀಡಿದ್ದ ದೂರು ಆಧರಿಸಿ ತನಿಖೆಗೆ ಆದೇಶ ನೀಡಲಾಗಿದೆ.
ಮೈಸೂರು ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ತಮ್ಮ ಅವಧಿಯಲ್ಲಿ ಪಾರಂಪರಿಕ ಕಟ್ಟಡ ಸಂರಕ್ಷಣಾ ಸಮಿತಿಯಿಂದ ಅನುಮತಿ ಪಡೆಯದೆ 16.50 ಲಕ್ಷ ರೂ. ವೆಚ್ಚದಲ್ಲಿ ನೆಲಹಾಸು ನವೀಕರಣ ಮಾಡಿದ್ದರು. ಅಲ್ಲದೇ ಪರಿಸರ ಇಲಾಖೆ ಅನುಮತಿ ಪಡೆಯದೇ ಈಜುಕೊಳ, ಜಿಮ್ ನಿರ್ಮಿಸಿದ್ದರು ಎಂಬ ಆರೋಪ ಕೇಳಿ ಬಂದಿದ್ದರು.