ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೈಕ್ರೊ ಕಂಟೈನ್ಮೆಂಟ್ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದೊಗೆ ಮಾತನಾಡಿದ ಅವರು, ಹಳ್ಳಿಗಳಲ್ಲಿ ಕೊರೊನಾ ಎರಡನೇ ಅಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೊ ಕಂಟೈನ್ಮೆಂಟ್ ಮಾಡಲು ನಿರ್ಧರಿಸಲಾಗಿದೆ. ಮೈಕ್ರೊ ಕಂಟೈನ್ಮೆಂಟ್ ನಲ್ಲಿ ಸಮಿತಿ ರಚನೆ ಮಾಡಲಾಗುವುದು. ಸಮಿತಿಯಲ್ಲಿ ಸ್ಥಳೀಯ ಪೊಲೀಸರು, ಅಧಿಕಾರಿಗಳು ಇರುತ್ತಾರೆ. ಕೊರೊನಾ ಸೋಂಕಿತರಿಗೆ ಔಷಧಿ ವಿತರಿಸಲು ಸಹಾಯ ಮಾಡುತ್ತಾರೆ. ಜನರ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಲಿದ್ದಾರೆ ಎಂದು ಮಾಹಿತಿ ನೀಡಿದರು.
ಇಂದು ಸಂಜೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಭೆ ನಡೆಸಲಿದ್ದು ಸಭೆಯಲ್ಲಿ ಕೊರೊನಾ ಸ್ಥಿತಿಗತಿ ಬಗ್ಗೆ ಚರ್ಚಸಲಾಗುತ್ತದೆ. ಬ್ಲ್ಯಾಕ್ ಫಂಗಸ್ ನಿಯಂತ್ರಣದ ಬಗ್ಗೆಯೂ ಚರ್ಚಿಸುತ್ತೇವೆ. ಎರಡನೇ ಅಲೆಯಲ್ಲಿ ಕೊರೊನಾ ವೇಗವಾಗಿ ಹರಡುತ್ತಿದೆ. ಹೀಗಾಗಿ ಸಾವಿನ ಪ್ರಮಾಣ ಹೆಚ್ಚಳವಾಗಿದೆ ಎಂದರು.