ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC) ಎರಡನೇ ಬಾರಿ ನೂತನ ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೇ (GREG BARCLAY) ಆಯ್ಕೆಯಾಗಿದ್ದಾರೆ. ICC ಬೋರ್ಡ್ ಸದಸ್ಯರ ಒಮ್ಮತದ ಆಯ್ಕೆಯಾಗಿ ಎರಡನೇ ಬಾರಿ ಗ್ರೆಗ್ ಬಾರ್ಕ್ಲೇ ಆಯ್ಕೆಯಾದರು. ಈ ಮೂಲಕ 2020ರ ಬಳಿಕ 2022ರಲ್ಲಿ ಮತ್ತೊಮ್ಮೆ ಅಧ್ಯಕ್ಷರಾಗಿ 2 ವರ್ಷಗಳ ಅಧಿಕಾರವಧಿಯನ್ನು ಹಿಡಿದಿದ್ದಾರೆ.
2024ರ ವರೆಗೆ ಗ್ರೆಗ್ ಬಾರ್ಕ್ಲೇ ಅಧ್ಯಕ್ಷರಾಗಿರಲಿದ್ದಾರೆ. 2015ರ ICC ಏಕದಿನ ವಿಶ್ವಕಪ್ ನಲ್ಲಿ ನ್ಯೂಜಿಲೆಂಡ್ ನ ಡೈರೆಕ್ಷರ್ ಆಗಿ ಕೆಲಸ ಮಾಡಿದ್ದ ಗ್ರೆಗ್ ಬಾರ್ಕ್ಲೇ, ನಾರ್ಥನ್ ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಷನ್ ಸದಸ್ಯರು ಆಗಿದ್ದರು. ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನ ಹಲವು ಕಂಪನಿಗಳಲ್ಲಿ ಬೋರ್ಡ್ ನ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ ಅಪಾರ ಅನುಭವ ಇವರಿಗಿದೆ. ಇದೀಗ ಎರಡನೇ ಬಾರಿ ICC ಅಧ್ಯಕ್ಷರಾಗಿ ಮುನ್ನಡೆಸುವ ಹೊಣೆ ಹೊತ್ತಿದ್ದಾರೆ.
ಇದನ್ನೂ ಓದಿ : – T-20 ವಿಶ್ವಕಪ್- ಬಲಿಷ್ಠ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸಿ ಫೈನಲ್ ಗೆ ಲಗ್ಗೆ ಇಟ್ಟ ಪಾಕಿಸ್ತಾನ