ಬೆಂಗಳೂರು : ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದಂತೆ ಹೊಸವರ್ಷ, ಕ್ರಿಸ್ ಮಸ್ ಹಾಗೂ ಚಳಿಗಾಲ ಗಮನದಲ್ಲಿಟ್ಟು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಮಾರ್ಗಸೂಚಿಯಲ್ಲಿ ಏನಿದೆ?
- ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪುದೇಶಗಳಿಗೆ ತೆರಳಬೇಡಿ.
- ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು.
- ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲಿಸುವುದು.
- ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ, ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪುದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸಬೇಕು.
- ಅಂತರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು.