ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಜೈಲು ಶಿಕ್ಷೆ !

ಅನುಮತಿಯಿಲ್ಲದೆ ‘ಆಜಾದಿ ಮೆರವಣಿಗೆ’ ನಡೆಸಿದ ಐದು ವರ್ಷಗಳ ಹಿಂದಿನ ಪ್ರಕರಣದಲ್ಲಿ ಗುಜರಾತ್‌ನ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇತರ ಒಂಬತ್ತು ಮಂದಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ದೋಷಿಗಳೆಂದು ಘೋಷಿಸಿ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

Jignesh Mevani - Wikipedia

ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಜೆ ಎ ಪರ್ಮಾರ್ ಜಿಗ್ನೇಶ್ ಮೇವಾನಿ ಮತ್ತು ಎನ್‌ಸಿಪಿ ಕಾರ್ಯಾಧ್ಯಕ್ಷೆ ರೇಷ್ಮಾ ಪಟೇಲ್ ಮತ್ತು ಮೇವಾನಿಯ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್‌ನ ಕೆಲವು ಸದಸ್ಯರು ಸೇರಿದಂತೆ ಒಂಬತ್ತು ಮಂದಿಯನ್ನು ಕಾನೂನುಬಾಹಿರ ಸಭೆಯಲ್ಲಿ ಭಾಗವಾಗಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143 ರ ಅಡಿಯಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿದ್ದಾರೆ.

Jignesh Mevani rearrested in Assam for 'assaulting' officials after  securing bail in 'defamatory' tweet case | North East India News,The Indian  Express

ನ್ಯಾಯಾಲಯವು ಎಲ್ಲಾ 10 ಅಪರಾಧಿಗಳಿಗೆ ತಲಾ 1,000 ರೂ. ದಂಡ ವಿಧಿಸಿದೆ. ಜುಲೈ 2017ರಲ್ಲಿ ಅನುಮತಿಯಿಲ್ಲದೆ ಮೆಹ್ಸಾನಾದಿಂದ ಬನಸ್ಕಾಂತ ಜಿಲ್ಲೆಯ ಧನೇರಾಗೆ ‘ಆಜಾದಿ ಮೆರವಣಿಗೆ’ಯನ್ನು ಕೈಗೊಂಡಿದ್ದಕ್ಕಾಗಿ ಮೆಹ್ಸಾನಾ ಎ ವಿಭಾಗದ ಪೊಲೀಸರು ಜಿಗ್ನೇಶ್ ಮೇವಾನಿ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 143ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು.

Gujarat Elections: Dalit Leader Jignesh Mevani Wins Vadgam Seat | Mint

ಆಗ ಪಾಟಿದಾರ್ ಸಮುದಾಯಕ್ಕೆ ಮೀಸಲಾತಿಯ ಬೆಂಬಲಿಗರಾಗಿದ್ದ ರೇಷ್ಮಾ ಪಟೇಲ್  ಪಾದಯಾತ್ರೆಯಲ್ಲಿ ಭಾಗವಹಿಸಿದಾಗ ಯಾವುದೇ ರಾಜಕೀಯ ಪಕ್ಷದ ಸದಸ್ಯರಾಗಿರಲಿಲ್ಲ. ಎಫ್‌ಐಆರ್‌ನಲ್ಲಿ ಹೆಸರಿಸಲಾದ ಒಟ್ಟು 12 ಆರೋಪಿಗಳಲ್ಲಿ ಒಬ್ಬರು ಸಾವನ್ನಪ್ಪಿದ್ದರೆ, ಒಬ್ಬರು ಇನ್ನೂ ತಲೆಮರೆಸಿಕೊಂಡಿದ್ದಾರೆ. ಇದನ್ನು ಓದಿ :- ಜಮ್ಮು-ಕಾಶ್ಮೀರ ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆಗೊಳಿಸುವ ಅಂತಿಮ ಆದೇಶಕ್ಕೆ ಡಿಲಿಮಿಟೇಶನ್ ಪ್ಯಾನೆಲ್ ಸಹಿ..!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!