ರಶ್ಮಿಕಾ ಮಂದಣ್ಣ ಇನ್ ಸ್ಟಾ ಗ್ರಾಮ್ ಖಾತೆ ಹ್ಯಾಕ್ ಆಯ್ತಾ…?

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ತಮ್ಮ ದಿನಚರಿ ಕುರಿತು ಅವರು ಆಗಾಗ ಅಪ್ ಡೇಟ್ ನೀಡುತ್ತಾ ಇರುತ್ತಾರೆ.

ನಟಿ ರಶ್ಮಿಕಾ ಮಂದಣ್ಣ ( RASHIMIKA MADANNA ) ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ತಮ್ಮ ದಿನಚರಿ ಕುರಿತು ಅವರು ಆಗಾಗ ಅಪ್ ಡೇಟ್ ನೀಡುತ್ತಾ ಇರುತ್ತಾರೆ. ಆ ಪೈಕಿ ಹಲವರಿಗೆ ಇತ್ತೀಚೆಗೆ ಅಚ್ಚರಿ ಆಗಿದೆ. ರಶ್ಮಿಕಾ ಮಂದಣ್ಣ ಅವರ ಹೆಸರು ಉಲ್ಟಾ ಕಾಣಿಸಿದೆ. ಇದು ಹ್ಯಾಕರ್ ಗಳ ಕೈವಾಡ ಎಂದೇ ಅನೇಕರು ಭಾವಿಸಿದ್ದರು. ಆದರೆ ಅಸಲಿ ವಿಚಾರ ಏನು ಎಂಬುದನ್ನು ಈಗ ಸ್ವತಃ ರಶ್ಮಿಕಾ ಮಂದಣ್ಣ ಅವರೇ ವಿವರಿಸಿದ್ದಾರೆ.


ಖಾಸಗಿ ಕಂಪನಿಯೊಂದರ ಜೊತೆಗೆ ರಶ್ಮಿಕಾ ಮಂದಣ್ಣ ಕೈ ಜೋಡಿಸಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಅವರು ಅಭಿಯಾನ ಕೈಗೊಂಡಿದ್ದಾರೆ. ಅದರ ಅಂಗವಾಗಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯ ಹೆಸರು ಉಲ್ಟಾ ಕಾಣುವಂತೆ ಮಾಡಿದ್ದಾರೆ. ಅದರ ಸ್ಕ್ರೀನ್ ಶಾಟ್ ಹಂಚಿಕೊಂಡು, ‘ಓದಲು ಬಾರದ ಹೆಣ್ಣು ಮಕ್ಕಳಿಗೆ ಇದೇ ರೀತಿ ಅನಿಸುತ್ತದೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲ ಆಗಲಿದೆ ಎಂಬ ಕಾರಣಕ್ಕೆ ಅವರು ಈ ಅಭಿಯಾನದಲ್ಲಿ ಕೈ ಜೋಡಿಸಿದ್ದಾರೆ. ಅವರ ಕಾರ್ಯಕ್ಕೆ ಅಭಿಮಾನಿಗಳು ಭೇಷ್ ಎಂದಿದ್ದಾರೆ.

ಇದನ್ನು ಓದಿ : – ಅರುಣಾಚಲ ಪ್ರದೇಶದಲ್ಲಿ ಯುದ್ಧ ವಿಮಾನ ಗಸ್ತು ನಡೆಸುತ್ತಿರುವ ಭಾರತೀಯ ವಾಯುಪಡೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!