ಗಾಂಜಾ ಸೇವಿಸಿ ದರೋಡೆಗೆ ಹೊಂಚು ಹಾಕುತ್ತಿದ್ದವರ ಬಂಧನ!

ಹಾಸನ: ನಗರದಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಐವರು ಯುವಕರು ಗಾಂಜಾ ಸೇವಿಸಿ ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಪಟ್ಟಣದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಐವರು ಯುವಕರು ಗಾಂಜಾ ಸೇವಿಸಿ ಲಾಂಗ್ ಗಳನ್ನು ಹಿಡಿದು ದರೋಡೆಗೆ ಸಂಚು ರೂಪಿಸಿದ್ದವರನ್ನ ಬಂಧಿಸಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಹಾಸನ ಗ್ರಾಮಾಂತರ ಪೋಲಿಸ್ ಠಾಣೆಯ ಪಿಎಸ್ ಐ ಬಸವರಾಜು ನೇತೃತ್ವದ ತಂಡ ದಾಳಿ ವೇಳೆ. ಮನು, ಚಂದನ್, ಪ್ರಶಾಂತ, ಚೇತನ್, ಚರಣ್ ಎಂಬುವವರನ್ನು ವಶಕ್ಕೆ ಪಡೆಯಲಾಗಿ, ಚೇತನ್ ಹಾಗೂ ಚರಣ್ ಮೇಲೆ ಹಲವು ಪ್ರಕರಣಗಳಿರುವುದು ವಿಚಾರಣೆವೇಳೆ ಬೆಳಕಿಗೆ ಬಂದಿದೆ.
ಇನ್ನು ಬಂಧಿತರಿಂದ ಹಾಸನ ತಾಲ್ಲೂಕಿನ ಶಾಂತಿಗ್ರಾಮ ಹೋಬಳಿ ಗಾಣಿಗರಹೊಸಹಳ್ಳಿ ಗ್ರಾಮದ ಪುಟ್ಟರಾಜು ಎಂಬುವವರ ಮನೆಯ ಗಲ್ಲಿಯಲ್ಲಿ ಮಾರಕಾಸ್ತ್ರಗಳು ಹಾಗೂ ಗಾಂಜಾ ಸೊಪ್ಪನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.