ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ದಂಪತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಬೆಂಗಳೂರಿನ ತಮ್ಮ ನಿವಾಸದಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಎಚ್.ಡಿ. ದೇವೇಗೌಡ ಬುಧವಾರ ಬೆಳಿಗ್ಗೆ ಸ್ವತಃ ಟ್ವಿಟರ್ ನಲ್ಲಿ ಈ ವಿಷಯದ ದೃಢಪಡಿಸಿದ್ದು, ಕುಟುಂಬದ ಸದಸ್ಯರೊಂದಿಗೆ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿರುವುದಾಗಿ ತಿಳಿಸಿದ್ದಾರೆ.
ನನಗೂ ಹಾಗೂ ಪತ್ನಿ ಚನ್ನಮ್ಮಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ ಕೆಲವು ದಿನಗಳಿಂದ ನಮ್ಮೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ತಮ್ಮನ್ನು ತಾವು ಪರೀಕ್ಷಿಸಿಕೊಳ್ಳಬೇಕೆಂದು ಎಂದು ಅವರು ಮನವಿ ಮಾಡಿದ್ದಾರೆ.
ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಭಯಭೀತರಾಗದಂತೆ ಇದೇ ವೇಳೆ ಮಾಜಿ ಪ್ರಧಾನಿ ವಿನಂತಿಸಿದ್ದಾರೆ.