ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಬುಧವಾರ ಮತ್ತೊಮ್ಮೆ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಮಂಗಳವಾರ ರಾತ್ರಿ ದಾಖಲಾಗಿದ್ದ ದೇವೇಗೌಡರು ಮತ್ತು ಪತ್ನಿ ಚೆನ್ನಮ್ಮ ಕ್ವಾರಂಟೈನ್ ಗೆ ಒಳಗಾಗಿದ್ದು, ಬುಧವಾರ ಮತ್ತೊಮ್ಮೆ ಪರೀಕ್ಷೆಗೆ ಒಳಗಾದರು.
ದೇವೇಗೌಡವರಿಗೆ ಜ್ವರ ಕಾಣಿಸಿಕೊಂಡಿದೆ. ಆದರೆ ಕೋವಿಡ್ ವರದಿಯಲ್ಲಿ ನೆಗೆಟಿವ್ ಬಂದಿದೆ. ಆದರೆ ಪತ್ನಿ ಚೆನ್ನಮ್ಮ ಪಾಸಿಟಿವ್ ಕಂಡು ಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.