ಬೆಂಗಳೂರು : ರಾಜ್ಯದಲ್ಲಿ ದಿನದಿಂದ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಲಾಕ್ ಡೌನ್ ವಿಸ್ತರಣೆ ಮಾಡುವುದು ಅನಿವಾರ್ಯವಾಗಿದೆ. ರಾಜ್ಯದ ಜನರ ಜೀವದ ಜೊತೆ ಆಟ ಆಡಬೇಡಿ ಎಂದು ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗಿಲ್ಲ. ಕೋವಿಡ್ ಟೆಸ್ಟ್ ಸಂಖ್ಯೆ ಕಡಿಮೆ ಮಾಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಮತ್ತಷ್ಟು ಸಾವು ನೋವುಗಳು ಹೆಚ್ಚಾಗುತ್ತವೆ. ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವುದಕ್ಕೆ ಹೊರಟಿದೆ. ಜನರ ದಿಕ್ಕು ತಪ್ಪಿಸಿ ಯಡವಟ್ಟು ಮಾಡುತ್ತೀರಿ. ಈಗಾಗಲೆ ಕೋವಿಡ್ ವಿಚಾರದಲ್ಲಿ ತಪ್ಪು ಮಾಡಿದ್ದೀರಿ. ಮತ್ತೆ ತಪ್ಪು ಮಾಡಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಸಲಹೆ ನೀಡಿದರು.
ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಮೊದಲು ವ್ಯಾಕ್ಸಿನ್ ಬಂದಾಗ ತೆಗೆದುಕೊಳ್ಳಬೇಡಿ ಎಂದು ಕಾಂಗ್ರೆಸ್ ಅಪಾಪ್ರಚಾರ ಮಾಡಿದೆ. ಈಗ ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಸಣ್ಣತನದ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.