ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಅಸುನೀಗಿದವರಿಗೆ ರಾಜ್ಯ ಸರಕಾರ ಕನಿಷ್ಠ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆಯ ಈ ಕುರಿತಾಗಿ ಸರಣಿ ಟ್ವೀಟ್ ಮಾಡಿರುವ ಅವರು, 5 ಲಕ್ಷ ರೂ. ಕೊಟ್ಟು ಕೈ ತೊಳೆದುಕೊಳ್ಳುವುದು ಸರಿಯಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದುರಂತಕ್ಕೆ ಸಾರಿಗೆ ಇಲಾಖೆಯ ಕರ್ತವ್ಯ ಲೋಪ ಮತ್ತು ದಿವ್ಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಎಚ್. ಡಿ. ಕುಮಾರಸ್ವಾಮಿ, ಎಷ್ಟೋ ಕನಸುಗಳನ್ನು ಕಟ್ಟಿಕೊಂಡಿದ್ದ ವಿದ್ಯಾರ್ಥಿಗಳ ಜೀವಗಳು ಬಲಿಯಾಗಿವೆ. ಮುಖ್ಯಮಂತ್ರಿಗಳು ಈ ದುರ್ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದೊಡ್ಡ ಮೊತ್ತದ ಪರಿಹಾರ ಘೋಷಣೆ ಮಾಡಬೇಕು. ಮೃತ ಕುಟುಂಬಗಳ ಜೀವನೋಪಾಯಕ್ಕೆ ನೆರವು ನೀಡಬೇಕು ಎಂದು ಆಗ್ರಹಿಸಿದ್ಧಾರೆ.
0 53 Less than a minute