ಐಷಾರಾಮಿ ಕಾರಿನಲ್ಲಿ ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನನ್ನು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹೈದರಾಬಾದ್ ನಲ್ಲಿ ಬಂಧಿಸಿದ್ದಾರೆ.
ಬಸವರಾಜ್ ಅಲಿಯಾಸ್ ಪ್ರಕಾಶ ಅಲಿಯಾಸ್ ಜಂಗ್ಲಿ ಬಂಧಿತ ಕುಖ್ಯಾತ ಕಳ್ಳ. ಬಂಧಿತನಿಂದ 80 ಲಕ್ಷ ಮೌಲ್ಯದ 1 ಕೆಜಿ 367 ಗ್ರಾಂ ಚಿನ್ನಾಭರಣ, 1.50 ಲಕ್ಷ ರೂ. ನಗದು ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಬಸವರಾಜ ತಮಿಳುನಾಡಿನಿಂದ ಐಷಾರಾಮಿ ಕಾರಿನಲ್ಲಿ ಬಂದು ಬೆಂಗಳೂರಿನಲ್ಲಿ ಕಳ್ಳತನ ಮಾಡುತ್ತಿದ್ದ. ಆರೋಪಿ ಬಂಧನದಿಂದ 10ಕ್ಕೂ ಹೆಚ್ಚು ಪ್ರಕರಣ ಬೆಳಕಿಗೆ ಬಂದಿದೆ.
ಸಿಸಿಬಿ ಇನ್ಸ್ ಪೆಕ್ಟರ್ ಹಜರೇಶ್ ಕಿಲ್ಲೇದಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಹೈದರಾಬಾದ್ ನಲ್ಲಿ ಬಂಧಿಸಿದ ಆರೋಪಿಯನ್ನು ಸಿಸಿಬಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ.