ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 6570 ಕೊರೋನಾ ಕೇಸ್ ದಾಖಲಾಗಿವೆ. 36 ಜನ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 12,767 ಕ್ಕೆ ಏರಿಕೆಯಾಗಿದೆ.
ಇಂದು 2393 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,73,949 ಜನ ಡಿಸ್ಚಾರ್ಜ್ ಆಗಿದ್ದಾರೆ. 53,395 ಸಕ್ರಿಯ ಪ್ರಕರಣಗಳಿದ್ದು, 357 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,40,130 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿಗೆ ಕೊರೋನಾ ಮತ್ತೆ ಶಾಕ್ ನೀಡಿದೆ. ಇವತ್ತು ಒಂದೇ ದಿನ 4,422 ಕೊರೋನಾ ಕೇಸ್ ಪತ್ತೆಯಾಗಿವೆ. ತಿಂಗಳ ಅವಧಿಯಲ್ಲೇ ಸೋಂಕಿತರ ಸಂಖ್ಯೆ ಡಬಲ್ ಆಗ್ತಿದೆ. ಬೆಂಗಳೂರಿನಲ್ಲಿ ಒಂದೇ ದಿನ 22 ಜನ ಸೋಂಕಿತರು ಮೃತಪಟ್ಟಿದ್ದಾರೆ. ಬರೋಬ್ಬರಿ 38946 ಸಕ್ರಿಯ ಪ್ರಕರಣಗಳಿವೆ.