ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 89,129 ಕೊರೋನಾ ಕೇಸ್ಗಳು ಪತ್ತೆಯಾಗಿದೆ. 714 ಮಂದಿ ಸೋಂಕಿಗೆ ಬಲಿಯಾಗಿದ್ದು, ಇದು ನಾಲ್ಕು ತಿಂಗಳಿನಲ್ಲೇ ಗರಿಷ್ಠ ಸಾವಿನ ಸಂಖ್ಯೆಯಾಗಿದೆ. ಕೊರೋನಾ ಸೋಂಕಿನ ಪ್ರಮಾಣವೂ ಆರು ತಿಂಗಳಲ್ಲಿ ಅತ್ಯಧಿಕವಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,23,92,260ಕ್ಕೆ ಏರಿದ್ದರೆ, ಮೃತರ ಸಂಖ್ಯೆ 1,64,110ಕ್ಕೆ ಹೆಚ್ಚಳವಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 6,58,909ಕ್ಕೆ ಹೆಚ್ಚಳವಾಗಿದೆ. ಇದು ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಶೇ.5ರಷ್ಟಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 44,202 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,15,69,241ಕ್ಕೆ ತಲುಪಿದೆ ಎಂದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.