ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ 7ರಿಂದ 6 ಮೀಟರ್ ಎತ್ತರದಲ್ಲಿ ಸುಳಿಗಾಳಿ ಸೃಷ್ಟಿಯಾಗಿದ್ದು ವಾಯುವ್ಯ ಹಾಗೂ ಪಶ್ಚಿಮಕ್ಕೆ ಚಲಿಸುವ ನಿರೀಕ್ಷೆ ಇದೆ. ಹೀಗಾಗಿ ರಾಜ್ಯದ ಕೆಲ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು, ಹೈ ಆಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ಕೂಡ ಭಾರಿ ಮಳೆ ಸಂಭವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆ ಸೇರಿದಂತೆ 9 ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಲಬುರಗಿ, ಕೊಪ್ಪಳ, ಯಾದಗಿರಿ, ಬಾಗಲಕೋಟೆ, ಜೆಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು,ತುಂತುರು ಅಥವಾ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.