ಬೆಂಗಳೂರು : ನಾಳೆಯಿಂದ ಎರಡು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ವರ್ಷಧಾರೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್ 13 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯಕ್ಕೆ ನೈರುತ್ಯ ಮಾನ್ಸೂನ್ ಕಾಲಿಟ್ಟಿದ್ದು, ವರುಣ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಒಳನಾಡಿನಲ್ಲೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್ಡಿಆರ್ಎಫ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.