ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಕರಾವಳಿ ಜಿಲ್ಲೆಗಳು ಮತ್ತು ಬೆಂಗಳೂರಿನಲ್ಲಿ ವರುಣನ ಆರ್ಭಟವಿರಲಿದ್ದು, ಇನ್ನೂ 3 ದಿನ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ. ಇಂದಿನಿಂದ ಜೂನ್ 7 ರವರಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ : – ಶಿಕ್ಷಣ ಸಚಿವರ ಮನೆ ಮೇಲಿನ ದಾಳಿ ಪ್ರಕರಣ – ಬಂಧಿತರನ್ನ ಭೇಟಿ ಮಾಡಲಿರೋ ಡಿಕೆಶಿ