ನವದೆಹಲಿ: ಇಂದಿನಿಂದ(ಮಾರ್ಚ್ 30- ಏಪ್ರಿಲ್ 1) ಮೂರು ದಿನ ದೇಶದ ಏಳು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಮಾರ್ಚ್ 30-31ರವರೆಗೆ ಆರೆಂಜ್ ಅಲರ್ಟ್ ಕೂಡ ನೀಡಿದೆ.
ಬಂಗಾಳಕೊಲ್ಲಿಯಿಂದ ದಕ್ಷಿಣ ಪಶ್ಚಿಮ ದವರೆಗಿನ ಪ್ರಬಲ ಕೆಳಮಟ್ಟದ ಮಾರುತಗಳ ಪ್ರಭಾವದಿಂದ ಈಶಾನ್ಯ ರಾಜ್ಯಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಗಳಿದ್ದು, ಮಾರ್ಚ್ 30 ಮತ್ತು ಏಪ್ರಿಲ್ 2ರ ಅವಧಿಯಲ್ಲಿ ಈಶಾನ್ಯ ರಾಜ್ಯಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.