ಈಗಾಗಲೇ ದೇಶದ ಹಲವು ಭಾಗಗಳಲ್ಲಿ ಮಳೆಯಾಗಿದೆ. ಕರ್ನಾಟಕ ಕೇರಳ (Karnataka – Kerala) ಸೇರಿ ದಕ್ಷಿಣದ ಹಲವು ರಾಜ್ಯದಲ್ಲಿ ಮಳೆಯಾಗಿದ್ದು ಭಾರತೀಯ ಹವಾಮಾನ ಇಲಾಖೆ (IMD) ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇಂದಿನಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗಲಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ, ಉತ್ತರ ಕರ್ನಾಟಕದಲ್ಲೂ ಭಾರೀ ಮಳೆಯಾಗುತ್ತಿದ್ದು, ಇನ್ನೆರಡು ದಿನ ಉತ್ತರ ಒಳನಾಡಿನಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ. ಇದನ್ನು ಓದಿ :- ಬಿಟ್ ಕಾಯಿನ್ ಹಗರಣದ ಬಗ್ಗೆ FBI ತನಿಖೆ – ಇದು ನಾಚಿಕೆಗೇಡಿನ ಸಂಗತಿ ಎಂದ ಸಿದ್ದರಾಮಯ್ಯ
ಇಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಉಡುಪಿ, ಶಿವಮೊಗ್ಗ, ಹಾಸನ, ಮೈಸೂರು, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಸಾಕಷ್ಟು ಮಳೆ ಆಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಇಂದು ಸಹ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನು ಓದಿ :- ಮೋದಿಯಷ್ಟು ಸುಳ್ಳು ಹೇಳಿರುವ ಪ್ರಧಾನಿ ಯಾರು ಇಲ್ಲ- ಸಿದ್ದರಾಮಯ್ಯ ವಾಗ್ದಾಳಿ