ಪೆರು: ಕುಸ್ಕೋ ಪ್ರಾಂತ್ಯದಲ್ಲಿ ಸೇನಾ ಹೆಲಿಕಾಪ್ಟರ್ ಪತನವಾದ ಪರಿಣಾಮ ಐವರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಸಶಸ್ತ್ರ ಪಡೆಗಳ ಜಂಟಿ ಕಮಾಂಡ್ ಮಾಹಿತಿ ನೀಡಿದೆ. ಪತನವಾದ ಹೆಲಿಕಾಪ್ಟರ್ನಲ್ಲಿ ಒಟ್ಟು 12 ಸೈನಿಕರು ಅಕ್ರಮ ಮಾದಕವಸ್ತು ಕಳ್ಳಸಾಗಣೆ ವಿರುದ್ಧ ಜಾಗೃತ ಕಾರ್ಯಾಚರಣೆ ನಡೆಸಲು ತೆರಳುತ್ತಿದ್ದರು.
ಸಶಸ್ತ್ರ ಪಡೆಗಳ ಧೈರ್ಯಶಾಲಿ ಸಿಬ್ಬಂದಿಯ ಸಾವಿಗೆ ಸಶಸ್ತ್ರ ಪಡೆಗಳ ಜಂಟಿ ಕಮಾಂಡ್ ವಿಷಾದ ವ್ಯಕ್ತಪಡಿಸುತ್ತದೆ ಎಂದು ಮೃತರಿಗೆ ಸಂತಾಪ ಸೂಚಿಸಲಾಗಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೆಲಿಕಾಪ್ಟರ್ ಪತನದಲ್ಲಿ ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.