ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ತನಿಖಾ ವರದಿ ನೀಡುವಂತೆ ರಾಜ್ಯ ಸರಕಾರ ಮತ್ತು ಎಸ್ ಐಟಿಗೆ ರಾಜ್ಯ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಿಡಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ವಕೀಲ ಉಮೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಂತರ ಆದೇಶ ನೀಡಲು ನಿರಾಕರಿಸಿತು. ಅಲ್ಲದೇ ಮುಚ್ಚಿದ ಲಕೋಟೆಯಲ್ಲಿ ತನಿಖೆಯ ವರದಿ ನೀಡುವಂತೆ ಸರಕಾರ ಮತ್ತು ಎಸ್ ಐಟಿಗೆ ಸೂಚಿಸಿತು.
ಸಿಡಿ ಪ್ರಕರಣದಲ್ಲಿ ತನಿಖೆಯ ವಿವರಗಳು ಮಾಧ್ಯಮಗಳಿಗೆ ಸೋರಿಕೆ ಆಗುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ ಎಂದು ವಕೀಲ ಜಿ.ಆರ್. ಮೋಹನ್ ಮತ್ತೊಂದು ದೂರು ಸಲ್ಲಿಸಿದ್ದಾರೆ.
ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಜರ್ಡ್, ಎಸ್ಐಟಿ ಯಿಂದ ಮಾಹಿತಿ ಸೋರಿಕೆ ಆರೋಪಕ್ಕೆ ಆಧಾರವೇನು? ಕಾನೂನು ಬಾಹಿರವಾಗಿ ವರ್ತಿಸಿದ್ದಾರೆಂಬುದಕ್ಕೆ ಸಾಕ್ಷ್ಯವಿದೆಯೇ? ವಿನಾಕಾರಣ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು.