ದ್ವಿತೀಯ ಪಿಯುಸಿ ಫಲಿತಾಂಶ ಕುರಿತು 12 ಸದಸ್ಯರ ಸಮಿತಿ ಸ್ಪಷ್ಟ ವರದಿ ನೀಡುವವರೆಗೂ ಯಾವುದೇ ಕಾರಣಕ್ಕೂ ಫಲಿತಾಂಶ ಪ್ರಕಟಿಸಬಾರದು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ.
ರಿಪೀಟರ್ಸ್ ಪರೀಕ್ಷೆ ನಡೆಸದೇ ಅಥವಾ ಅವರ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳದೇ ದ್ವಿತೀಯ ಪಿಯುಸಿ ಫಲಿತಾಂಶ ಹೇಗೆ ನೀಡುತ್ತೀರಿ ಎಂದು ಪ್ರಶ್ನಿಸಿರುವ ರಾಜ್ಯ ಹೈಕೋರ್ಟ್, ಜುಲೈ 5ರೊಳಗೆ ಮಾಹಿತಿ ನೀಡುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿದೆ.
12 ಜನರ ಸಮಿತಿ ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂದು ನಮಗೆ ಸ್ಪಷ್ಟವಾಗಿ ಹೇಳಿ. ಅಲ್ಲಿಯವರೆಗೂ ಫಲಿತಾಂಶ ಪ್ರಕಟಿಸಬೇಡಿ ಎಂದು ಹೈಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ.