HIJAB CASE – ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಮುಸ್ಲಿಂ ಲಾ ಬೋರ್ಡ್

ಹಿಜಾಬ್ (Hijab) ಕುರಿತಾಗಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ನ್ಯಾಯಮಂಡಳಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮೊಹಮದ್ ರಹೀಂ, ಮುನೀಸಾ ಬುಸ್ರಾ, ಜೆಲಿಸಾ ಸುಲ್ತಾನಾ ಎನ್ನುವವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆ ಮಾಡಲಾಗಿರುವ 2ನೇ ಅರ್ಜಿ ಇದಾಗಿದೆ.

ಇಸ್ಲಾಂನಲ್ಲಿ (Islam) ಹಿಜಾಬ್ (Hijab) ಹೆಣ್ಣುಮಕ್ಕಳಿಗೆ ಅವಿಭಾಜ್ಯ ಅಂಗವಲ್ಲ. ಆ ಕಾರಣಕ್ಕಾಗಿ ಶಾಲೆಗೆ ಸರ್ಕಾರ ಸೂಚಿಸಿರುವ ಸಮವಸ್ತ್ರವೇ ಕಡ್ಡಾಯ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ನೀಡಿದ ತೀರ್ಪಿನ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ನ್ಯಾಯ ಮಂಡಳಿ (All India Muslim Personal Law Board) ಸುಪ್ರೀಂಕೋರ್ಟ್ (Supreme Court) ಮೆಟ್ಟಿಲೇರಿದೆ.

ಈ ಹಿಂದೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿನಲ್ಲಿ ಕುರಾನ್ ಬಗ್ಗೆ ತಪ್ಪಾದ ವ್ಯಾಖ್ಯಾನ ಮಾಡಲಾಗಿದೆ. ಹದೀಸ್ ಬಗ್ಗೆ ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ. ಇಸ್ಲಾಮಿಕ್ ಕಾನೂನುಗಳನ್ನು ತಪ್ಪಾಗಿ ಅರ್ಥಮಾಡಿಕೊಳ್ಳಲಾಗಿದೆ. ಹಾಗಾಗಿ ಈ ಬಗ್ಗೆ ಸೂಕ್ತವಾದ ವಿಚಾರಣೆ ನಡೆಸಿ ಹೈಕೋರ್ಟ್ ತೀರ್ಪನ್ನು ಮರುಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದೆ.

ಇದನ್ನು ಓದಿ :- SUPREMECOURT- ಹಿಜಾಬ್ ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ – ಸಿಜೆಐ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!