ಹಿಜಾಬ್ (Hijab) ವಿವಾದದ ಬಗ್ಗೆ ನ್ಯಾಯಾಧೀಶರು ವಿಭಜಿತ ತೀರ್ಪು ನೀಡಿರುವುದರಿಂದ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್ ನ (High court) ಹಿಜಾಬ್ ತೀರ್ಪು ಊರ್ಜಿತದಲ್ಲಿ ಇರಲಿದೆ.
ಮುಂದಿನ ದಿನಗಳಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಕರಣದ ವಿಚಾರಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅನಂತರವಷ್ಟೇ ಸುಪ್ರೀಂ ಕೋರ್ಟ್ ನ ಆದೇಶ ಪ್ರಕಟವಾಗಲಿದ್ದು, ಅದು ಹೈಕೋರ್ಟ್ ಆದೇಶದ ಜಾಗದಲ್ಲಿ ಊರ್ಜಿತಕ್ಕೆ ಬರಲಿದೆ. ನ್ಯಾ. ಹೇಮಂತ್ ಗುಪ್ತಾ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದರೆ ನ್ಯಾ. ಸುಧಾಂಶು ಧೂಲಿಯಾ ಅವರು ಕರ್ನಾಟಕ ಹೈಕೋರ್ಟ್ ಆದೇಶವನ್ನು ವಜಾಗೊಳಿಸಿದ್ದಾರೆ. ಇಬ್ಬರು ನ್ಯಾಯಮೂರ್ತಿಗಳಿಂದ ಭಿನ್ನವಾದ ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಈ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆಯಾಗಲಿದೆ. ಇದನ್ನೂ ಓದಿ :- ಬಿಜೆಪಿ ಸೇರಲು ನಿರಾಕರಿಸಿದ್ದರಿಂದ ಗಂಗೂಲಿಗೆ 2ನೇ ಬಾರಿಗೆ BCCI ಸ್ಥಾನ ಕೈತಪ್ಪಿತಾ…?
ಹೀಗಾಗಿ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್ ನ ಆದೇಶ ಯಥಾಸ್ಥಿತಿ ಮುಂದುವರಿಯಲಿದ್ದು, ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎನ್ನಲಾಗಿದೆ. ಶಾಲೆ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಮೂರು ವಾರಗಳ ಹಿಂದೆ ತೀರ್ಪನ್ನು ಕಾಯ್ದಿರಿಸಿತ್ತು. ಸೆಪ್ಟೆಂಬರ್ 22ರವರೆಗೂ ನಿರಂತರವಾಗಿ 10 ದಿನ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧೂಲಿಯಾ ಅವರಿದ್ದ ಪೀಠ ವಾದ- ಪ್ರತಿವಾದ ಆಲಿಸಿ ಇಂದು ತೀರ್ಪು ಪ್ರಕಟಿಸಿದೆ.
ಇದನ್ನೂ ಓದಿ :- ಹಿಜಾಬ್ ಕುರಿತು ಸುಪ್ರೀಂಕೋರ್ಟ್ ತೀರ್ಪು ಹಿನ್ನೆಲೆ – ಬೆಂಗಳೂರಿನಲ್ಲಿ ಬಿಗಿ ಬಂದೋಬಸ್ತ್