ಹಿಜಾಬ್ ವಿವಾದ ಕುರಿತಂತೆ ಹೈಕೋರ್ಟ್ ನೀಡಿದ ತೀರ್ಪಿನ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಸಮವಸ್ತ್ರದ ಕುರಿತು ನ್ಯಾಯಾಲಯ ಒಳ್ಳೆಯ ತೀರ್ಪು ನೀಡಿದೆ. ಇದು ಮಕ್ಕಳ ಭವಿಷ್ಯ ಶಿಕ್ಷಣದ ಪ್ರಶ್ನೆ. ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದು ಇಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರು ಪಾಲಿಸಬೇಕು ಎಂದು ಹೇಳಿದ್ದಾರೆ. ಎಲ್ಲರೂ ಸಹಕಾರ ಕೊಟ್ಟು ಶಾಂತಿ ಸೌಹಾರ್ದತೆ ಕಾಪಾಡಬೇಕು. ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಈ ತೀರ್ಪನ್ನು ಒಪ್ಪಿಕೊಳ್ಳಬೇಕು. ತೀರ್ಪಿನ ಅನ್ವಯ ಶಿಕ್ಷಣ ಕೂಡಲು ಎಲ್ಲರು ಸಹಕಾರ ಕೊಡಬೇಕು.
ಎಲ್ಲ ವಿದ್ಯಾರ್ಥಿಗಳು ಹೈಕೋರ್ಟ್ ಆದೇಶ ಪಾಲನೆ ಮಾಡಬೇಕು. ತರಗತಿ ಬಹಿಷ್ಕಾರ ಮಾಡದೆ, ಪರೀಕ್ಷೆ ಬರೆಯಬೇಕು ಎಂದು ಹೇಳಿದ್ದಾರೆ. ಯಾರಾದರೂ ಕಾನೂನು ಕೈಗೆತ್ತಿಕೊಂಡ್ರೆ ಗೃಹ ಇಲಾಖೆ ತಕ್ಕ ಪಾಠ ಕಲಿಸಲಿದೆ ಎಂದು ಕಾನೂನು ಕದಡುವವರಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
0 200 Less than a minute