ಇಸ್ಲಾಂನಲ್ಲಿ ಹಿಜಾಬ್ ಕಡ್ಡಾಯವೆಂದು ಎಲ್ಲಿಯೂ ಉಲ್ಲೇಖಿಸಿಲ್ಲ. ಹೀಗಾಗಿ ಶಾಲಾ-ಕಾಲೇಜುಗಳಿಗೆ ಹಿಜಾಬ್ ಧರಿಸಿ ಬರುವಂತಿಲ್ಲ. ಸರ್ಕಾರಗಳು ಏನು ವಸ್ತ್ರ ಸಂಹಿತೆ ರೂಪಿಸಿವೆಯೋ ಅದೇ ಕಡ್ಡಾಯ ಎಂದು ಕರ್ನಾಟಕ ಹೈಕೋರ್ಟ್ನ ತ್ರಿಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ನೇತೃತ್ವದ ನ್ಯಾ.ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ.ಎಂ.ಖಾಜಿ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ. ಈ ತೀರ್ಪು ಹೊರಬೀಳುತ್ತಿದ್ದಂತೆ ಹೈಕೋರ್ಟ್ ಸಿಜೆ ರಿತು ರಾಜ್ ಅವಸ್ತಿ ಅವರ ಬೆಂಗಳೂರಿನಲ್ಲಿರುವ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಯಾವುದೇ ಅಹಿತಕರ ಘಟನೆ, ಹಿಂಸಾಚಾರ, ಗಲಾಟೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಹೈಕೋರ್ಟ್ ನೀಡಿರುವ ತೀರ್ಪಿಗೆ ಇಸ್ಲಾಂ ಸಮುದಾದ ಮುಖಂಡರು ವಿರೋಧವ್ಯಕ್ತ ಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.
0 84 Less than a minute