ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ- ನವೆಂಬರ್ 12ಕ್ಕೆ ಮತದಾನ-ಡಿಸೆಂಬರ್‌ 8ಕ್ಕೆ ಮತಎಣಿಕೆ

ಚುನಾವಣಾ ಆಯೋಗ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಬಿಡುಗಡೆ ಬಿಡುಗಡೆ ಮಾಡಿದ್ದು, ನವೆಂಬರ್ 12ರಂದು ಮತದಾನ ನಡೆಯಲಿದೆ.

ಚುನಾವಣಾ ಆಯೋಗ ಹಿಮಾಚಲ ಪ್ರದೇಶ ವಿಧಾನಸಭೆ ( vidhan sabhe election ) ಚುನಾವಣೆ ವೇಳಾಪಟ್ಟಿ ಬಿಡುಗಡೆ ಬಿಡುಗಡೆ ಮಾಡಿದ್ದು, ನವೆಂಬರ್ 12ರಂದು ಮತದಾನ ನಡೆಯಲಿದೆ. ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆಗೆ ದಿನಾಂಕ ನಿಗದಿ ಮಾಡಿದ್ದು, ನವೆಂಬರ್ 12ಕ್ಕೆ ಮತದಾನ ನಡೆಯಲಿದ್ದು, 68 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಹಿಮಾಚಲ ಸದನದ ಅವಧಿಯು ಜನವರಿ 8, 2023 ರಂದು ಕೊನೆಗೊಳ್ಳುತ್ತದೆ.


ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸಲು ನಾವು ಬದ್ಧರಾಗಿದ್ದೇವೆ. ಯಾವುದೇ ತೊಡಕಿಲ್ಲದೆ ಚುನಾವಣೆ ಆಯೋಜನೆಗೆ ಎಲ್ಲ ಕ್ರಮ ಕೈಗೊಳ್ಳಲಾಗುವುದು. ಚುನಾವಣೆಯಲ್ಲಿ ಜನರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ನಾವು ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಚುನಾವಣೆಗಳ ಮೂಲಕ ಮಹಿಳಾ ಸಬಲೀಕರಣವನ್ನು ತೋರಿಸಲು ಪ್ರಯತ್ನಿಸುತ್ತೇವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ( rajeev kumar ) ಹೇಳಿದ್ದಾರೆ. ಅಂತೆಯೇ ರಾಜಕೀಯ ಪಕ್ಷಗಳು, ರಾಜ್ಯದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ಪೊಲೀಸ್ ಇಲಾಖೆ ಮತ್ತು ಪೊಲೀಸ್ ನೋಡಲ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ :- 

ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಲ್ಲಿ 55 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಈ ಪೈಕಿ 1.86 ಲಕ್ಷ ಮತದಾರರು ಮೊದಲ ಬಾರಿಗೆ ಮತದಾನ ಮಾಡುತ್ತಿದ್ದು, 80 ವರ್ಷಕ್ಕಿಂತ ಮೇಲ್ಪಟ್ಟ 1.22 ಲಕ್ಷ ಮತ್ತು 100 ವರ್ಷಕ್ಕಿಂತ ಮೇಲ್ಪಟ್ಟ 1,184 ಮತದಾರರಿದ್ದಾರೆ ಎಂದು ಆಯೋಗ ಹೇಳಿದೆ. ಇನ್ನು ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕವನ್ನು ನಂತರ ಪ್ರಕಟಿಸುವುದಾಗಿ ಹೇಳಿದ್ದಾರೆ. ಗುಜರಾತ್ ಅಸೆಂಬ್ಲಿಯ ಅವಧಿಯು ಫೆಬ್ರವರಿ 18, 2023 ರಂದು ಕೊನೆಗೊಳ್ಳುತ್ತದೆ. 182 ಸ್ಥಾನಗಳ ಗುಜರಾತ್ ವಿಧಾನಸಭೆಯಲ್ಲಿ 111 ಬಿಜೆಪಿ ಮತ್ತು 62 ಕಾಂಗ್ರೆಸ್ ಶಾಸಕರಿದ್ದಾರೆ.

ಇದನ್ನೂ ಓದಿ :- ಶಿವಾನಂದ ವೃತ್ತದ ಮೇಲೆ ನಿರ್ಮಿಸಲಾಗಿರುವ ಮೇಲ್ಸೇತುವೆಗೆ ‘ಪುನೀತ್ ರಾಜ್ ಕುಮಾರ್’ ಹೆಸರಿಡಿ – ಎನ್.ಆರ್.ರಮೇಶ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!