ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ಆರೋಪಿ ನಾಗೇಶ್ ನನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಧನ್ಯವಾದ ತಿಳಿಸಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು ಯುವತಿಯ ಮೇಲೆ ಆ್ಯಸಿಡ್ ಎರಚುವಿಕೆಯಂತಹ ಅಮಾನುಷ ಕೃತ್ಯ ಎಸಗಿ ಪರಾರಿಯಾಗಿದ್ದ ಕಿರಾತಕ ನಾಗೇಶ್ ಎಂಬ ಆರೋಪಿಯನ್ನು ನಮ್ಮ ಪೊಲೀಸರು, ಅತ್ಯಂತ ಶ್ರಮ ಹಾಗೂ ದಕ್ಷತೆಯಿಂದ ನೆರೆಯ ತಮಿಳುನಾಡು ರಾಜ್ಯದಲ್ಲಿ ಅಡಗಿದ್ದವನನ್ನು ಬಂಧಿಸಿದ್ದಾರೆ. ಇದನ್ನೂ ಓದಿ : – ಆ್ಯಸಿಡ್ ನಾಗನ ಕಾಲಿಗೆ ಗುಂಡೇಟು
ಆರೋಪಿಯನ್ನು ಬಂಧಿಸಿ ಹೆಡೆಮುರಿ ಕಟ್ಟುವುದರ ಮೂಲಕ ನಮ್ಮ ಪೊಲೀಸರು, ದೇಶದಲ್ಲಿಯೇ ಅತ್ಯಂತ ದಕ್ಷತೆಯ ಹಾಗೂ ವೃತ್ತಿಪರ ಪಡೆಯೆಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ರು.
ಇದನ್ನೂ ಓದಿ : – ಸ್ವಾಮೀಜಿ ವೇಷಧರಿಸಿ ತಲೆಮರೆಸಿಕೊಂಡಿದ್ದ ಆ್ಯಸಿಡ್ ನಾಗ ಅರೆಸ್ಟ್